ಮಾರಿಷಸ್ ರಾಷ್ಟ್ರೀಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿ; ಪಿಎಂ ನವೀನ್ ರಾಮ್‌ಗೂಲಂ ಘೋಷಣೆ

ಮಾರಿಷಸ್‌ನ 57ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 11 ಮತ್ತು 12ರಂದು ಮಾರಿಷಸ್‌ಗೆ ಭೇಟಿ ನೀಡಲಿದ್ದಾರೆ. ನಿನ್ನೆ ಮಾರಿಷಸ್ ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ ಮಾರಿಷಸ್ ಪ್ರಧಾನಿ ನವೀನ್ ರಾಮ್‌ಗೂಲಂ ಅವರು ಶೇ. 70ರಷ್ಟು ಭಾರತೀಯ ಮೂಲದ ಜನರನ್ನು ಹೊಂದಿರುವ ದ್ವೀಪ ರಾಷ್ಟ್ರಕ್ಕೆ ಮೋದಿಯವರ ಭೇಟಿಯನ್ನು ಘೋಷಿಸಿದರು.