ಬುಲೆಟ್ ಪ್ರೂಫ್ ಗ್ಲಾಸ್ ಅಳವಡಿಕೆ- ಬೇಡವೆಂದು ತೆಗೆದಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಮಾಣೆಕ್​ ಶಾ ಪರೇಡ್ ಮೈದಾನದಲ್ಲಿ ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ತೆರೆದ ಜೀಪ್​ನಲ್ಲಿ ಪರೇಡ್​ ಪರಿವೀಕ್ಷಣೆ ಮಾಡಿ, ಗೌರವ ರಕ್ಷೆ ಸ್ವೀಕಾರ ಮಾಡಿದರು. ಗೌರವ ರಕ್ಷೆ ಸ್ವೀಕಾರದ ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ.