ಅರ್ಧಕ್ಕೆ ಭಾಷಣ ನಿಲ್ಲಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಮೊನ್ನೆಯಷ್ಟೇ ಬಸನಗೌಡ ಯತ್ನಾಳ್ ವಕ್ಫ್ ಭೂವಿವಾದ ಸಂಬಂಧಿಸಿದಂತೆ ವಿಜಯಪುರದಲ್ಲಿ ರೈತರ ಪರವಾಗಿ ಒಂದು ಯಶಸ್ವೀ ಹೋರಾಟ ನಡೆಸಿದರು. ಅದರ ಫಲವಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ರಚಿಸಿರುವ ಜಗದಂಬಿಕಾ ಪಾಲ್ ನೇತೃತ್ವದ ಜಂಟಿ ಸಂಸದೀಯ ಸಮಿತಿಯು ವಿಜಯಪುರಕ್ಕೆ ಆಗಮಿಸಿ ರೈತರ ಸಮಸ್ಯೆಗಳನ್ನು ಆಲಿಸಿತು.