ಪಾಕಿಸ್ತಾನ ಸೇನೆಯ ದಾಳಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾವು-ನೋವುಗಳು ಸಂಭವಿಸಿಲ್ಲ. ಜನರ ರಕ್ಷಣೆಗೆ ಭಾರತದ ಸೇನೆ, ಸಿಅರ್ಪಿಎಫ್, ಬಿಎಸ್ಎಫ್ ಮತ್ತು ಕಾಶ್ಮೀರದ ಪೊಲೀಸ್ ಸನ್ನದ್ಧ ಸ್ಥಿತಿಯಲ್ಲಿವೆ. ಆದರೆ, ಕೈಲಾಗದವನು ಮೈ ಪರಚಿಕೊಂಡಂತೆ ಪಾಕ್ ಸೇನೆಯು ನಾಗರಿಕರ ತಾಣಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸುತ್ತಿರುವುದು ಅದರ ಹೇಡಿತನಕ್ಕೆ ಮತ್ತೊಂದು ಸಾಕ್ಷಿಯಾಗಿದೆ.