‘ಕಬ್ಜ ಸೀಕ್ವೆಲ್ ಕಥೆ ಕೇಳಿಲ್ಲ, ಭೈರತಿ ರಣಗಲ್ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದೇನೆ’: ಶಿವರಾಜ್ಕುಮಾರ್

‘ಕಬ್ಜ’ ಸಿನಿಮಾ ಯಶಸ್ಸು ಕಂಡಿದೆ ಎಂದು ಚಿತ್ರದ ನಿರ್ದೇಶಕ, ನಿರ್ಮಾಪಕ ಆರ್. ಚಂದ್ರು ಹೇಳಿಕೊಂಡಿದ್ದಾರೆ. ಈ ಸಿನಿಮಾಗೆ ಸೀಕ್ವೆಲ್ ಸಿದ್ಧಗೊಳ್ಳುತ್ತಿದೆ. ಈ ಚಿತ್ರದಲ್ಲಿ ಶಿವರಾಜ್ಕುಮಾರ್ ಪಾತ್ರ ಹೈಲೈಟ್ ಆಗುವ ಸೂಚನೆ ಸಿಕ್ಕಿದೆ. ಈ ಬಗ್ಗೆ ಶಿವರಾಜ್ಕುಮಾರ್ ಅವರಿಗೆ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಶಿವಣ್ಣ ಉತ್ತರ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಟ ಶಿವರಾಜ್ಕುಮಾರ್ ಸುದ್ದಿಗೋಷ್ಠಿ ಕರೆದಿದ್ದರು. ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹಾಗೂ ಪ್ರಚಾರದಲ್ಲಿ ಶಿವಣ್ಣ ಭಾಗಿಯಾಗುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಅವರು ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.