ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ ಬರೆಯುವೆ: ಹೆಬ್ಬಾಳ್ಕರ್

ಒಂದೆಡೆ, ಸಿಟಿ ರವಿ ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ ಎನ್ನಲಾದ ಪ್ರಕರಣ ಮುಗಿದುಹೋದ ಅಧ್ಯಾಯ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದರೆ, ಮತ್ತೊಂದೆಡೆ ರಾಷ್ಟ್ರಪತಿಗಳಿಗೂ ದೂರು ನೀಡುವೆ. ವಿಡಿಯೋ ದಾಖಲೆ ಇದೆ, ಪ್ರಧಾನಿ ಮೋದಿ ಭೇಟಿಯಾಗಿ ಅವರಿಗೂ ನೀಡುವೆ ಎಂದಿದ್ದಾರೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.