ಕರ್ನಾಟಕದಾದ್ಯಂತ ಗಣೇಶ ಹಬ್ಬವನ್ನು ಅತ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಿಂದ ಗಣೇಶ ಪ್ರತಿಷ್ಠಾಪನೆ ಮಾಡುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಲಾಗಿದೆ. ಮಸೀದಿ ಆವರಣದಲ್ಲಿ ಗಣೇಶನನ್ನು ಕುರಿಸಿರುವುದು ಮತ್ತೊಂದು ವಿಶೇಷವಾಗಿದೆ.