ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ

ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಎ ತೊಯ್ಬಾದ ದಿ ರೆಸಿಸ್ಟೆನ್ಸ್​ ಫ್ರಂಟ್​ಗೆ ಸೇರಿದ ಭಯೋತ್ಪಾದಕರು ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮಂಗಳವಾರ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಹಲ್ಗಾಮ್‌ನ ಜನಪ್ರಿಯ ಬೈಸರನ್ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ನಿಖರವಾದ ಕ್ಷಣದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹುಲ್ಲುಗಾವಲಿನಲ್ಲಿ ವ್ಯಕ್ತಿಯೊಬ್ಬರು ತಮ್ಮ ವಿಡಿಯೋ ಮಾಡುತ್ತಿರುವಾಗ ಅಲ್ಲೇ ದೂರದಲ್ಲಿ ಉಗ್ರರು ಪ್ರವಾಸಿಗರ ಮೇಲೆ ನಡೆಸಿದ ದಾಳಿಯು ಕೂಡ ಸೆರೆಯಾಗಿದೆ. ದೃಷ್ಯ ತುಂಬಾ ಸ್ಪಷ್ಟವಾಗಿಲ್ಲದಿದ್ದರೂ ಅಲ್ಲಿ ನಡೆಯುತ್ತಿರುವ ಘಟನೆ, ಭಯವನ್ನು ಕಾಣಬಹುದು.