ಧೈರ್ಯಶಾಲಿ ಪೊಲೀಸ್ ಅಧಿಕಾರಿಯೊಬ್ಬರು ಟವರ್ ಹತ್ತಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಆ ಮಹಿಳೆಯನ್ನು ರಕ್ಷಿಸಿದ್ದಾರೆ. ಈ ಹೈ-ವೋಲ್ಟೇಜ್ ನಾಟಕ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಪೊಲೀಸ್ ಅಧಿಕಾರಿಯನ್ನು ಪೊಲೀಸ್ ಕಾನ್‌ಸ್ಟೆಬಲ್ ರಾಹುಲ್ ಸಿಂಗ್ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಉಳಿಸಲು ಕಾನ್‌ಸ್ಟೆಬಲ್ ಮಾಡಿದ ಧೈರ್ಯ ಮತ್ತು ಪ್ರಯತ್ನಕ್ಕಾಗಿ ಸಾಮಾಜಿಕ ಮಾಧ್ಯಮ ಬಳಕೆದಾರರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಅವರನ್ನು ಶ್ಲಾಘಿಸುತ್ತಿದ್ದಾರೆ.