ಚಿಕ್ಕಬಳ್ಳಾಪುರ ತಾಲ್ಲೂಕಿನ ಮರಸನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಕಂಟೇನರ್ ಬೈಕ್ ಮೇಲೆ ಬಿದ್ದ ಪರಿಣಾಮ ತಂದೆ ಮತ್ತು ನಾಲ್ಕು ವರ್ಷದ ಮಗಳು ದೀಕ್ಷಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೆಂಕಟೇಶ್ ಪತ್ನಿ ರೂಪಾ ಅವರ ಸ್ಥಿತಿ ಗಂಭೀರವಾಗಿದೆ. ವಾಹನಗಳ ಅಜಾಗರೂಕ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.