78ನೇ ಸ್ವಾತಂತ್ರ್ಯ ದಿನಾಚರಣೆಗೆ ಸಂಭ್ರಮಕ್ಕೆ ಮಾಣಿಕ್ ಷಾ ಮೈದಾನ ಸಜ್ಜಾಗಿದೆ. ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಲಿದ್ದಾರೆ. ಇನ್ನು ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಶಕ್ತಿಸೌಧ ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ ಮಾಡಲಾಗಿದೆ. ವಿಧಾನಸೌಧದ ಮುಂಭಾಗ ನೂರಾರು ಜನರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.