ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ಉತ್ತರ ಪ್ರದೇಶದ ಹಮೀರ್‌ಪುರದ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ನಮಾಜ್ ಮಾಡಿದ 71 ವರ್ಷದ ಮಹಿಳೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಸೆಕ್ಯುರಿಟಿ ಸಿಬ್ಬಂದಿಯನ್ನು ಕೂಡ ಅಮಾನತುಗೊಳಿಸಲಾಗಿದೆ. ಆ ವೃದ್ಧೆ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.