ಶಾಲಾ ಕಾಂಪೌಂಡ್​ ನಿರ್ಮಾಣ ವಿಚಾರ: ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಶಾಲಾ ಕಾಂಪೌಂಡ್ ನಿರ್ಮಾಣ ವಿಚಾರಕ್ಕೆ ಕಾಂಗ್ರೆಸ್​ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪಾಪಿಶೆಟ್ಟಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಎರಡು ಪಕ್ಷದ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ಗೌನಿಪಲ್ಲಿ ಹಾಗೂ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.