ಹರೀಶ್ಚಂದ್ರ ಘಾಟ್ನಲ್ಲಿ ಸ್ಪಂದನಾ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ನಟಿ ಸ್ಪಂದನಾ ಅವರ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ಮಾಡಲಾಗುತ್ತಿದೆ. ಬೆಂಗಳೂರಿನ ಹರೀಶ್ಚಂದ್ರ ಘಾಟ್ನಲ್ಲಿ ಸ್ಪಂದನಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಈಡಿಗ ಸಮುದಾಯದ ಪ್ರಕಾರ ಎಲ್ಲವೂ ನಡೆಯಲಿದೆ. ಸದ್ಯ ಸ್ಪಂದನಾ ಅವರ ತಂದೆ ಶಿವರಾಂ ಮನೆಯಲ್ಲಿ ಸ್ಪಂದನಾ ಅವರ ಪಾರ್ಥಿವ ಶರೀರ ಇಡಲಾಗಿದೆ. ಅನೇಕ ಸೆಲೆಬ್ರಿಟಿಗಳು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಹರೀಶ್ಚಂದ್ರ ಘಾಟ್ನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಹೇಗಿದೆ ಎಂಬುದಕ್ಕೆ ಈ ವಿಡಿಯೋದಲ್ಲಿ ಮಾಹಿತಿ ಇದೆ.