ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿರುವ ಬಿಂಡಿಗ ದೇವೀರಮ್ಮ ಬೆಟ್ಟದ ತುದಿಯಲ್ಲಿ ನೆಲೆಸಿದ್ದಾಳೆ. ವರ್ಷಕ್ಕೆ ಒಮ್ಮೆ ಮಾತ್ರ ದೇವೀರಮ್ಮ ಭಕ್ತರಿಗೆ ದರ್ಶನ ನೀಡುತ್ತಾಳೆ. ಹಾಗಾಗಿ ದೇವರ ದರ್ಶನಕ್ಕಾಗಿ ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಬರಿಗಾಲಲ್ಲೇ ಬೆಟ್ಟ ಹತ್ತಿ, ದೇವರ ದರ್ಶನ ಮಾಡುತ್ತಾರೆ. ಆ ಮೂಲಕ ದೇವೀರಮ್ಮನ ಕೃಪೆಗೆ ಪಾತ್ರರಾಗುತ್ತಾರೆ. 3 ಸಾವಿರ ಅಡಿಗಳ ಎತ್ತರವಿರುವ ಬೆಟ್ಟದ ಮೇಲೆ ದೇವಿರಮ್ಮ ನೆಲೆಸಿದ್ದಾಳೆ.