ಕೃಷ್ಣಾ ನದಿ ಪಾತ್ರದಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿದೆ ಆಲಮಟ್ಟಿ ಡ್ಯಾಂ

ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾದರೆ ಮಾತ್ರ ಆಲಮಟ್ಟಿ ಡ್ಯಾಂ ಭರ್ತಿಯಾಗುತ್ತದೆ. ಕಳೆದ ವರ್ಷ ರಾಜ್ಯದಲ್ಲಿ ಬರಗಾಲವಿದ್ದು ರಾಜ್ಯದ ಎಲ್ಲ ಜಲಾಶಯಗಳು ಸಂಪೂರ್ಣ ಭರ್ತಿಯಾಗಿರಲಿಲ್ಲ. ಆದರೆ ಕಳೆದ ಬಾರಿ ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾದ ಕಾರಣ ಆಲಮಟ್ಟಿ ಡ್ಯಾಂ ಭರ್ತಿಯಾಗಿತ್ತು. ಈ ಬಾರಿಯೂ ಆಲಮಟ್ಟಿ ಜಲಾಶಯ ಭರ್ತಿಯಾಗಲಿದೆ.