ಉತ್ತರಾಖಂಡದಲ್ಲಿ ಹೊತ್ತಿ ಉರಿದ ರಾಸಾಯನಿಕ ಕಾರ್ಖಾನೆ, ಹಲವರು ಸಿಲುಕಿರುವ ಶಂಕೆ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಜ್ವಾಲೆ ಮುಗಿಲೆತ್ತರಕ್ಕೆ ಹಬ್ಬಿದೆ. ಈ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ. ಜಿಲ್ಲೆಯ ಇಬ್ರಾಹಿಂಪುರ ಗ್ರಾಮದಲ್ಲಿರುವ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ, ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಭಾಗಶಃ ಯಶಸ್ವಿಯಾಗಿದ್ದಾರೆ.. ಹಲವರು ಕಾರ್ಖಾನೆಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿಯ ತೀವ್ರತೆ ಹಾಗೂ ದಟ್ಟ ಹೊಗೆಯು ರಕ್ಷಣಾ ಕಾರ್ಯಾಚರಣೆಗೆ ಸವಾಲಾಗಿ ಪರಿಣಮಿಸಿದೆ.