ಮಳೆಗೆ ಸೋರುತ್ತಿರುವ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬೆಳಗ್ಗೆಯಿಂದ ನಿರಂತರವಾಗಿ ಮಳೆಯ ಅಬ್ಬರ ಮುಂದುವರಿದಿದೆ. ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯ ಕಟ್ಟಡ ಒಂದೇ ದಿನದ ಭಾರೀ ಮಳೆಗೆ ಸೋರುತ್ತಿದೆ. ಚಿಕ್ಕೋಡಿ ಆಸ್ಪತ್ರೆ 2ನೇ ಮಹಡಿಯಲ್ಲಿ ಮೇಲ್ಛಾವಣಿಯಿಂದ ನೀರು ಸೋರುತ್ತಿದೆ. ಆಸ್ಪತ್ರೆ ಕಟ್ಟಡ ಸೋರುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಬಕೆಟ್ ಇಟ್ಟಿದ್ದಾರೆ.