ನಾಗಮಂಗಲದಲ್ಲಿ ಸಂಭವಿಸಿದ ಹಿಂಸಾಚಾರದ ಬಗ್ಗೆ ಕರ್ನಾಟಕದ ಗೃಹ ಸಚೊವ ಡಾ. ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ನಾಗಮಂಗಲದಲ್ಲಿ ಕೋಮು ಗಲಭೆ ಸಂಭವಿಸಿಲ್ಲ, ಅದು ಆಕಸ್ಮಿಕ ಘಟನೆ ಎಂದ ಅವರು, ರಾಜಕೀಯ ಮಾಡಬೇಡಿ ಎಂದು ಪ್ರತಿಪಕ್ಷ ಬಿಜೆಪಿಗೆ ಮನವಿ ಮಾಡಿದ್ದಾರೆ.