ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ2 ಆಗಿ ಜೈಲು ಸೇರಿರುವ ದರ್ಶನ್ ಕೂಡ ಇದೇ ಕಾರಾಗೃಹದಲ್ಲಿದ್ದಾರೆ. ಇದೀಗ ದರ್ಶನ್ ಜೈಲಿನಲ್ಲಿ ಕಾಫಿ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ಫೋಟೋ ನೋಡಿದ ಮೃತ ರೇಣುಕಾಸ್ವಾಮಿ ಕುಟುಂಬ, ಜೈಲಧಿಕಾರಿಗಳ ವಿರುದ್ಧ ಕಿಡಿಕಾರಿದೆ. ಸಿಬಿಐಗೆ ವಹಿಸಬೇಕು ಅಂತಾ ಒತ್ತಾಯಿಸಿದ್ದಾರೆ.