ಬಸ್​ ಪಲ್ಟಿಯಾಗಿ ಬಾಲಕ ಸಾವು, ಐವರಿಗೆ ಗಾಯ

ಬೆಂಗಳೂರಿನಿಂದ ಗಜೇಂದ್ರಗಡಕ್ಕೆ ಹೊರಟಿದ್ದ ಖಾಸಗಿ ಬಸ್ ಯಲಬುರ್ಗಾ ತಾಲೂಕಿನ ಹೊಸಳ್ಳಿ ಬಳಿ ಬುಧವಾರ ಬೆಳಗ್ಗೆ ಪಲ್ಟಿಯಾಗಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಭೀಕರತೆಯನ್ನು ಸಾರುವ ವಿಡಿಯೋ ಇಲ್ಲಿದೆ ನೋಡಿ.