ನಾವು ಸ್ವಲ್ಪ ನಿಧಾನವಾಗಿ ಬೆಳೆಯುತ್ತಿದ್ದೇವೆ. ಆದರೆ, ನಾವು ಬೆಳೆಯುತ್ತಿದ್ದೇವೆ. ನಾವು ಎದುರಿಸುತ್ತಿರುವ ಸಾರ್ವತ್ರಿಕ ಸಮಸ್ಯೆಯೆಂದರೆ ನಿರುದ್ಯೋಗ ಸಮಸ್ಯೆಯನ್ನು ನಿಭಾಯಿಸಲು ನಮಗೆ ಸಾಧ್ಯವಾಗುತ್ತಿಲ್ಲ. ನಮ್ಮ ಯುಪಿಎ ಸರ್ಕಾರವಾಗಲಿ ಅಥವಾ ಇಂದಿನ ಎನ್‌ಡಿಎ ಸರ್ಕಾರವಾಗಲಿ ಈ ದೇಶದ ಯುವಕರಿಗೆ ಉದ್ಯೋಗದ ಬಗ್ಗೆ ಸ್ಪಷ್ಟ ಉತ್ತರವನ್ನು ನೀಡಲು ಸಾಧ್ಯವಾಗಿಲ್ಲ ಎಂಬುದನ್ನು ನಿರಾಕರಿಸಲು ಸಾಧ್ಯವೇ ಇಲ್ಲ ಎಂದು ರಾಹುಲ್ ಗಾಂಧಿ ಸಂಸತ್ ಅಧಿವೇಶನದ ಭಾಷಣದಲ್ಲಿ ಹೇಳಿದ್ದಾರೆ.