ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ/ ಪಂಗಡಗಳ ವಿದ್ಯಾರ್ಥಿಗಳಿಗಾಗಿ ಸರ್ಕಾರ ನಡೆಸುವ ಹಾಸ್ಟೆಲ್ ಮತ್ತು ವಸತಿ ಶಾಲೆಗಳು ದುಸ್ಥಿತಿಯಲ್ಲಿವೆ. ಯಾವುದಾದರೂ ದುರ್ಘಟನೆ ನಡೆದಾಗ ಮಾತ್ರ ಸಚಿವ ಅಥವಾ ಅಧಿಕಾರಿಗಳು ಭೇಟಿ ನೀಡುವ ಬದಲು ನಿಯಮಿತವಾಗಿ ಹೋಗಿ ಪರಿಶೀಲನೆ ನಡೆಸುತ್ತಿದ್ದರೆ ಪರಿಸ್ಥಿತಿ ಸುಧಾರಿಸುತ್ತದೆ.