ಮತ್ತೊಂದು ಘಟನೆ: ತೆರೆದ ಬೋರ್​ವೆಲ್​​​ಗೆ ಬಿದ್ದ 2 ವರ್ಷದ ಬಾಲಕ

ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಶುಕ್ರವಾರ ಆರು ವರ್ಷದ ಬಾಲಕ ಬೋರ್‌ವೆಲ್‌ಗೆ ಬಿದ್ದಿರುವ ಘಟನೆಯೊಂದು ನಡೆದಿದೆ. ಉತ್ತರ ಪ್ರದೇಶದ ಗಡಿ ಸಮೀಪದ ಮಾಣಿಕಾ ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಾಲಕ ತೆರೆದ ಬೋರ್‌ವೆಲ್ ಬಳಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ರೇವಾ ಜಿಲ್ಲಾಧಿಕಾರಿ ಪ್ರತಿಭಾ ಪಾಲ್ ಅವರು ಹೇಳಿರುವ ಪ್ರಕಾರ, ಮಗು ಸುಮಾರು 40 ಅಡಿ ಆಳದಲ್ಲಿ ಸಿಲುಕಿಕೊಂಡಿದೆ.