ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ತಪ್ಪಲಿನಲ್ಲಿ ಭಾರಿ ಬೆಂಕಿ

ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯ ಚಂದ್ರದ್ರೋಣ ಪರ್ವತ ಪರ್ವತ ಸಾಲಿನ ಪ್ರಮುಖ ಪ್ರದೇಶಗಳಲ್ಲಿ ಕಾಡ್ಗಿಚ್ಚು ತೀವ್ರ ಸ್ವರೂಪ ಪಡೆದಿದ್ದು, ಬೆಂಕಿ ಧಗಧಗಿಸಿ ಉರಿಯುತ್ತಿದೆ. ಅಪಾರ ಪ್ರಮಾಣದಲ್ಲಿ ಸಸ್ಯ ಸಂಪತ್ತು ನಾಶವಾಗಿದೆ. ಒಂದೆಡೆ, ಬೇಸಗೆ ಆರಂಭಕ್ಕೂ ಮುನ್ನವೇ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ವಿವಿಧ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದರೆ, ಮತ್ತೊಂದೆಡೆ ಕಾಳ್ಗಿಚ್ಚು ಆರಂಭವಾಗಿದೆ.