ಮಂಜುನಾಥ್ ವಿಶ್ಚಕರ್ಮ ನಿರ್ಮಾಣದ ಈ ಚಿತ್ರದಲ್ಲಿ ಗುರುನಂದನ್, ಮೃದುಲಾ, ರವಿಶಂಕರ್, ಅಚ್ಚುತ್, ಚಿಕ್ಕಣ್ಣ, ಸಾಧುಕೋಕಿಲಾ ಮುಂತಾದವರು ನಟಿಸಿದ್ದಾರೆ. ಸದ್ಯ ಬೇಕಿತ್ತಾ ಬೇಕಿತ್ತಾ ಹಾಡಿನಿಂದ ಸದ್ದು ಮಾಡ್ತಿರೋ ರಾಜು ಜೇಮ್ಸ್ ಬಾಂಡ್ ಚಿತ್ರ ಸದ್ಯದಲ್ಲೇ ಪ್ರೇಕ್ಷಕರೆದುರಿಗೆ ಬರಲಿದೆ. ಈ ಹಾಡು ನೋಡಿ ನಿರ್ದೇಶಕ ಮಠ ಗುರುಪ್ರಸಾದ್ ಖುದ್ದು ಈ ಹಾಡಿನ ಬಗ್ಗೆ ವಿಶೇಷವಾಗಿ ಮಾತನಾಡಿದ್ದಾರೆ.