ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್ಐಟಿ ಸಂಪೂರ್ಣವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಧೀನದಲ್ಲಿದೆ. ಅವರು ಹೇಳಿದಂತೆ ಕೆಲಸ ಮಾಡುತ್ತದೆ. ಹೀಗಾಗಿ ಅದರ ಮೇಲೆ ವಿಶ್ವಾಸ ಇಡಲಾಗದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಜತೆಗೆ, ಶೀಘ್ರದಲ್ಲೇ ಇನ್ನೊಂದು ಸಿಡಿ ಬಿಡುಗಡೆಯಾಗಲಿದೆ ಎಂದಿದ್ದಾರೆ.