ಅಸ್ಸಾಂನಲ್ಲಿ ಕಾಂಗ್ರೆಸ್​ ಸಂಸದನ ಮೇಲೆ ಗುಂಪಿನಿಂದ ಹಲ್ಲೆ

ಅಸ್ಸಾಂನ ಧುಬ್ರಿ ಕ್ಷೇತ್ರದ ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್ ಮತ್ತು ಅವರ ವೈಯಕ್ತಿಕ ಭದ್ರತಾ ಅಧಿಕಾರಿಗಳ (ಪಿಎಸ್‌ಒ) ಮೇಲೆ ಗುರುವಾರ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಗುಂಪೊಂದು ಹಲ್ಲೆ ನಡೆಸಿದ್ದು, ಸಂಸದ ಮತ್ತು ಅವರ ವೈಯಕ್ತಿಕ ಭದ್ರತಾ ಅಧಿಕಾರಿ ಗಾಯಗೊಂಡಿದ್ದಾರೆ. ರುಪೋಹಿ ಪೊಲೀಸ್ ಠಾಣೆ ವ್ಯಾಪ್ತಿಯ ಗುಣೋಮರಿ ಗ್ರಾಮದಲ್ಲಿ ಪಕ್ಷದ ಸಭೆಯಲ್ಲಿ ಭಾಗವಹಿಸಲು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಸಂಸದ ಹುಸೇನ್ ಅವರ ಮೇಲೆ ಜನರ ಗುಂಪೊಂದು ಕ್ರಿಕೆಟ್ ಬ್ಯಾಟ್‌ಗಳಿಂದ ಹಲ್ಲೆ ನಡೆಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.