ಜೆಡಿಎಸ್-ಬಿಜೆಪಿ ಮೈತ್ರಿಯ ಬಳಿಕ ಲೋಕ ಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದ ತಯಾರಿ ಹೇಗಿದೆ ಅಂತ ಕೇಳಿದ ಪ್ರಶ್ನೆಗೆ ರಾಜಣ್ಣ, ಅವರೇನಾದರೂ ಮಾಡಿಕೊಳ್ಳಲಿ, ಲೋಕ ಸಭಾ ಚುನಾವಣೆಯಲ್ಲಿ ಅವೆರಡು ಪಕ್ಷಗಳ ನಡುವೆ ನಡೆದಿರುವ ಮೈತ್ರಿ ಕಾಂಗ್ರೆಸ್ ಪಕ್ಷದ ಅವಕಾಶಗಳ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಎಲ್ಲ ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲಾಗುವುದು ಎಂದರು.