ತೆಲಂಗಾಣದಲ್ಲಿ ಅಸೆಂಬ್ಲಿ ಚುನಾವಣೆ ರಂಗೇರುತ್ತಿದೆ. ರಾಜಕೀಯ ಪಕ್ಷಗಳ ಜಿದ್ದಾಜಿದ್ದಿ ಜೋರಾಗಿದೆ. ಈ ಮಧ್ಯೆ ರಾಜ್ಯದ ಸದ್ಯದ ಪರಿಸ್ಥಿತಿಯನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳು ತಮ್ಮ ವಾದ- ಪ್ರತಿವಾದಗಳನ್ನು ಮಂಡಿಸುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತೆಲಂಗಾಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಕುಸಿಯಲಿದೆ. ಕಾಂಗ್ರೆಸ್ ಆಡಳಿತದಲ್ಲಿ ಆರು ತಿಂಗಳಿಗೊಮ್ಮೆ ಸಿಎಂ ಬದಲಾಯಿಸುತ್ತಲೇ ಇರುತ್ತಾರೆ. ಈ ಪರಿಸ್ಥಿತಿಯಲ್ಲಿ, ಸ್ಥಿರ ಸರ್ಕಾರ ಇರುವುದಿಲ್ಲ ಮತ್ತು ಸರ್ಕಾರದಿಂದ ಯಾವುದೇ ತ್ವರಿತ ನೀತಿ ನಿರ್ಧಾರಗಳು ಇರುವುದಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಕುಸಿತ ಕಂಡಿದೆ. ಏತನ್ಮಧ್ಯೆ, ಹೈದರಾಬಾದ್‌ನಲ್ಲಿ ರಿಯಲ್ ಎಸ್ಟೇಟ್ ಗ್ರಾಫ್ ಬೆಳೆಯುತ್ತಿದೆ - ಕೆಟಿಆರ್