ವಂಚನೆ ಪ್ರಕರಣದಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸುನೀತಾ ಚೌಹಾಣ್ ಸ್ಪಷ್ಟನೆ

ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗೋಪಾಲ್​ ಜೋಶಿ ಅರೆಸ್ಟ್​ ಮಾಡಲಾಗಿದೆ. ಇತ್ತ ಹುಬ್ಬಳ್ಳಿಯಲ್ಲಿ ದೂರುದಾರೆ ಸುನೀತಾ ಚೌಹಾಣ್ ಮಾತನಾಡಿದ್ದು, ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.