ಲಭ್ಯವಿರುವ ಮಾಹಿತಿ ಪ್ರಕಾರ ಒಂದು ಸಾವಿರಕ್ಕೂ ಹೆಚ್ಚು ಪುಟಗಳ ವರದಿಯಲ್ಲಿ ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣೀಕ ಸಮೀಕ್ಷೆ ಹಾಗೂ ಜಾತಿವಾರು ಜನಸಂಖ್ಯೆ ಅಡಕವಾಗಿದೆ. ವರದಿಯನ್ನು ಸ್ವೀಕರಿಸಿದ ಬಳಿಕ ಮಾತಾಡಿದ ಸಿದ್ದರಾಮಯ್ಯ, ಜಾತಿಗಣತಿ ವರದಿಯನ್ನು ಸ್ವೀಕರಿಸಲಾಗಿದೆ, ವರದಿಯಲ್ಲಿ ಏನೇನಿದೆ ಅಂತ ಮಾಹಿತಿ ಇಲ್ಲ, ಸಂಪುಟ ಸಭೆಯಲ್ಲಿ ವರದಿಯ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.