ಮೈಸೂರಿನ ನಲಪಾಡ್ ಹೋಟೆಲ್ ಮೆಟ್ಟಿಲುಗಳಿಗೆ ಕನ್ನಡ ಬಾವುಟದ ಬಣ್ಣ

ಮೈಸೂರಿನ ಹೈವೇ ಸರ್ಕಲ್‌ನಲ್ಲಿರುವ ನಲಪಾಡ್ ಹೋಟೆಲ್ ವಿರುದ್ಧ ಕನ್ನಡ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ. ಹೋಟೆಲ್ ಮೆಟ್ಟಿಲುಗಳಿಗೆ ಕನ್ನಡ ಬಾವುಟದ ಬಣ್ಣ ಹಚ್ಚಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಮೈಸೂರಿನ ಹೈವೇ ವೃತ್ತದಲ್ಲಿರುವ ನಲಪಾಡ್ ಹೋಟೆಲ್ ಮೆಟ್ಟಿಲುಗಳಿಗೆ ಕನ್ನಡ ಬಾವುಟದ ಬಣ್ಣ ಹಚ್ಚಲಾಗಿದೆ. ಹೀಗಾಗಿ ಕನ್ನಡ ಪರ ಸಂಘಟನೆಗಳು ಹೋಟೆಲ್ ಮುಂದೆ ಜಮಾಯಿಸಿ ಆಕ್ರೋಶ ಹೊರ ಹಾಕಿವೆ.