ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪೆನ್ ಡ್ರೈವ್ ಹಂಚಿಕೆ ಮಾಡಿದ ಆರೋಪದ ಮೇಲೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಈ ವಿಚಾರದ ಬಗ್ಗೆ ಮಾತನಾಡಿದ ಎಚ್.ಡಿ. ರೇವಣ್ಣ ಪರ ವಕೀಲರು, ಕೋರ್ಟ್ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡ ಐವರು ಆರೋಪಿಗಳನ್ನು ಎಸ್ಐಟಿ ಇನ್ನೂ ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ಹಾಸನದ ಹೆಣ್ಮಕ್ಕಳ ಮಾನ ಮರ್ಯಾದೆ ಹರಾಜು ಹಾಕಿದ ಈ ವ್ಯಕ್ತಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.