ಬೀರೂರು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ದೇವಸ್ಥಾನದ ಮಹಾನವಮಿ ಬಯಲಿನಲ್ಲಿ ರವಿವಾರ ನಸುಕಿನ ಜಾವ ಕಾರ್ಣಿಕ ನುಡಿಯಲಾಯಿತು. ಮೈಲಾರಲಿಂಗ ಸ್ವಾಮಿಯ ಕಾರ್ಣಿಕ ಕೇಳಲು ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸಿದ್ದರು.