ಪುಂಡ ವಿದ್ಯಾರ್ಥಿಗಳ ಅಟ್ಟಾಡಿಸಿ ಲಾಠಿ ಬೀಸಿದ ಪೊಲೀಸರು

ಕಲಬುರಗಿಯ ಕೇಂದ್ರಿಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ನಡುವೆ ಊಟದ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಪರಿಸ್ಥಿತಿ ಬಿಗಡಾಯಿಸಿದ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ನಿಯಂತ್ರಣಕ್ಕೆ ತರಲು ನೋಡಿದ್ದಾರೆ. ಆದರೆ, ಪುಂಡ ವಿದ್ಯಾರ್ಥಿಗಳು ಪೊಲೀಸರ ಜತೆಗೇ ವಾಗ್ವಾದ ನಡೆಸಿ ಹಲ್ಲೆ ಮಾಡುವ ಹಂತಕ್ಕೆ ಹೋಗಿದ್ದಾರೆ. ಸಿಟ್ಟಿಗೆದ್ದ ಪೊಲೀಸರು ಲಾಠಿ ಬೀಸಿದ್ದಾರೆ. ವಿಡಿಯೋ ಇಲ್ಲಿದೆ.