ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಾಡಿದ ಆರೋಪ ದರ್ಶನ್ ಮೇಲಿದೆ. ಸಹಚರರ ಜೊತೆ ಸೇರಿ ಈ ಕೃತ್ಯ ನಡಿಸಿದ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇಂದು (ಜೂನ್ 12) ಎಲ್ಲ ಆರೋಪಿಗಳನ್ನು ಘಟನಾ ಸ್ಥಳವಾದ ಪಟ್ಟಣಗೆರೆ ಶೆಡ್ಗೆ ಕರೆದುಕೊಂಡು ಹೋಗಿ ಮಹಜರು ಮಾಡಲಾಯಿತು. ಬಳಿಕ ದರ್ಶನ್ ಮತ್ತು ಸಹಚರರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ವಾಪಸ್ ಕರೆದುಕೊಂಡು ಬರಲಾಯಿತು. ಈ ವೇಳೆ ದರ್ಶನ್ ಅವರನ್ನು ನೋಡಲು ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ದಾರಿಗೆ ದಡ್ಡ ಬಂದ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ ಒಟ್ಟು 17 ಜನರ ಮೇಲೆ ಆರೋಪ ಬಂದಿದ್ದು, 13 ಜನರನ್ನು ಬಂಧಿಸಲಾಗಿದೆ. ನಾಪತ್ತೆ ಆಗಿರುವ 4 ಜನರಿಗೆ ಪೊಲೀಸರು ಬಲೆ ಬೀಸಿದ್ದಾರೆ.