ವಿಶ್ವಕಪ್ ಗೆಲ್ಲಿಸಿಕೊಟ್ಟ ಆ ಕ್ಯಾಚ್ ಬಗ್ಗೆ ಸೂರ್ಯಕುಮಾರ್ ಮಾತು
ಸೂರ್ಯಕುಮಾರ್ ಯಾದವ್ ತನ್ನ ಸಮಯ ಪ್ರಜ್ಞೆ ಮೆರೆದು, ಸಿಕ್ಸರ್ ಹೊಗುತ್ತಿದ್ದ ಚೆಂಡನ್ನು ಕ್ಯಾಚ್ ಆಗಿ ಪರಿವರ್ತಿಸಿದರು. ಈ ಕ್ಯಾಚ್ ಟೀಂ ಇಂಡಿಯಾವನ್ನು ಚಾಂಪಿಯನ್ ಆಗಿ ಮಾಡಿತ್ತು. ಇದೀಗ ಈ ಕ್ಯಾಚ್ ಬಗ್ಗೆ ಸೂರ್ಯಕುಮಾರ್ ಮಾತನಾಡಿರುವ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.