ಚಿಂತಾಮಣಿ ತಾಲ್ಲೂಕಿನ ಸಂತೇಕಲ್ಲಹಳ್ಳಿ ಬಳಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರು ಸ್ಥಳಕ್ಕೆ ಧಾವಿಸಿ, ಆ್ಯಂಬುಲೆನ್ಸ್‌ಗಳನ್ನು ಕರೆಸಿ ಗಾಯಾಳುಗಳನ್ನು ಆಸ್ಪತ್ರೆಗಳಿಗೆ ರವಾನಿಸಿದ್ದಾರೆ.