ಲಲಿತ್ ಮಹಲ್ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ನಟ ದರ್ಶನ್ ಸುಮಾರು 10 ತಿಂಗಳ ಬಳಿಕ ಸಿನಿಮಾ ಚಿತ್ರೀಕರಣಕ್ಕೆ ಮರಳಿದ್ದಾರೆ. ಮೈಸೂರಿನಲ್ಲಿ ನಿನ್ನೆಯಿಂದ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಹೋಟೆಲ್ ಲಲಿತ್ ಮಹಲ್ನಲ್ಲಿ ಇಂದು ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ.