ಚೌಲಗೆರೆ ಬಳಿ ಹೊಸ ಟೋಲ್​ಗೆ ತೀವ್ರ ವಿರೋಧ

ಬೆಂಗಳೂರು ಮಂಗಳೂರು ಹೆದ್ದಾರಿಯಲ್ಲಿ ಹಾಸನ ಜಿಲ್ಲೆಯ ಚೌಲಗೆರೆ ಗ್ರಾಮದ ಬಳಿ ನಿರ್ಮಾಣವಾಗಿರುವ ಹೊಸ ಟೋಲ್ ಪ್ಲಾಜಾ ವಿರುದ್ಧ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ನಿಯಮ ಉಲ್ಲಂಘಿಸಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಸಂಘಟನೆಗಳು ಸೋಮವಾರ ಬೆಳಗ್ಗೆಯೇ ಪ್ರತಿಭಟನೆ ನಡೆಸಿವೆ.