4,4,4,4,6,4,4..! ಸತತ 7 ಎಸೆತಗಳಲ್ಲಿ 7 ಬೌಂಡರಿ ಬಾರಿಸಿದ ಸ್ಮೃತಿ

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ರನ್​ಗಳ ಶಿಖರ ಕಟ್ಟಿದ್ದಾರೆ. ವಿಂಡೀಸ್ ವಿರುದ್ಧದ ಈ ಸರಣಿಯಲ್ಲಿ ಸತತ ಎರಡು ಅರ್ಧಶತಕ ಸಿಡಿಸಿದ್ದ ಸ್ಮೃತಿ ಇದೀಗ ಮೂರನೇ ಪಂದ್ಯದಲ್ಲೂ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಅದರಲ್ಲೂ ಈ ಪಂದ್ಯದಲ್ಲಿ ಸ್ಮೃತಿ ಸತತ 7 ಬೌಂಡರಿಗಳನ್ನು ಬಾರಿಸುವ ಮೂಲಕ ಮೈದಾನದಲ್ಲಿ ನೆರೆದಿದ್ದವರು ಹುಚ್ಚೆದು ಕುಣಿಯುವಂತೆ ಮಾಡಿದ್ದಾರೆ.