ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಆಯಾ ತಾಲೂಕು ತಹಶೀಲ್ದಾರಗಳು ರೈತರಿಗೆ ನೋಟಿಸ್ ನೀಡುತ್ತಿರುವುದಕ್ಕೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.