ಟೊರೊಂಟೊದ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಡೆಲ್ಟಾ ಏರ್ಲೈನ್ಸ್ ವಿಮಾನ ಅಪಘಾತಕ್ಕೀಡಾಗಿದೆ.15 ಪ್ರಯಾಣಿಕರು ಗಾಯಗೊಂಡಿದ್ದಾರೆ. ವಿಮಾನವು ಮಿನ್ನಿಯಾಪೋಲಿಸ್‌ನಿಂದ ಟೊರೊಂಟೊಗೆ ಹಾರುತ್ತಿದ್ದಾಗ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಯಲ್ಲಿ ಮಗುಚಿ ಬಿದ್ದಿದೆ. ಸ್ಥಳದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಇತರರು ಸಣ್ಣಪುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದಾರೆ. ವಿಮಾನದಲ್ಲಿ 80 ಮಂದಿ ಪ್ರಯಾಣಿಕರಿದ್ದರು.