ಪ್ರಧಾನಿ ಮೋದಿ ಕಾಲು ಮುಟ್ಟಿ ನಮಸ್ಕರಿಸಿದ ಪಪುವಾ ನ್ಯೂಗಿನಿ ಪ್ರಧಾನಿ ಜೇಮ್ಸ್ ಮರಾಪೆ

ಪಪುವಾ ನ್ಯೂ ಗಿನಿಯಾದ ಪೋರ್ಟ್ ಮೊರೆಸ್ಬಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಪಪುವಾ ನ್ಯೂಗಿನಿಯಾ ಪ್ರಧಾನಿ ಜೇಮ್ಸ್ ಮರಾಪೆ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಅಚ್ಚರಿ ಎಂಬಂತೆ, ಜೇಮ್ಸ್ ಮರಾಪೆ ಅವರು ಪ್ರಧಾನಿ ಮೋದಿಯವರ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದರು.