ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಮೊದಲ ಮೊದಲನೇ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮೂಲತಃ ಮುಧೋಳ ತಾಲೂಕಿನ ವಜ್ರಮಟ್ಟಿ ಗ್ರಾಮದ ನಿವಾಸಿ ಆಗಿರುವ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು ಟಿವಿ9 ಜೊತೆಗೆ ಮಾತನಾಡಿದ್ದು, ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಕ್ಕೆ ನನಗೆ ತುಂಬಾ ಖುಷಿಯಾಗುತ್ತಿದೆ. ಓದುವುದಕ್ಕೆ ಯಾವುದೇ ಒತ್ತಡ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ.