ಮುಂಬೈನ ವಿಲೇ ಪಾರ್ಲೆಯಲ್ಲಿರುವ 90 ವರ್ಷ ಹಳೆಯ ದಿಗಂಬರ ಜೈನ ದೇವಾಲಯವನ್ನು ಧ್ವಂಸ ಮಾಡಿದ್ದಕ್ಕಾಗಿ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವಿರುದ್ಧ ಸಾವಿರಾರು ಜೈನರು ಪ್ರತಿಭಟನೆ ನಡೆಸಿದರು. ಬಿಎಂಸಿಯ ಕಚೇರಿಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಆ ದೇವಾಲಯದ ಪುನರ್ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ.