ಮಂಗಳೂರು: 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗತಜ್ಞ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಉರಗ ರಕ್ಷಕರೊಬ್ಬರು 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನು ಸೆರೆಹಿಡಿದಿದ್ದಾರೆ. ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿದ್ದ ಕಾಳಿಂಗ ಸರ್ಪದ ಸೆರೆಯಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.