ಚಿಂತಾಮಣಿಯಲ್ಲಿ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡು ಸುಟ್ಟುಹೋಗಿದೆ. ಡಿಕ್ಕಿಯ ರಭಸಕ್ಕೆ ಪಕ್ಕದಲ್ಲಿದ್ದ ಹತ್ತುಕ್ಕೂ ಹೆಚ್ಚು ಬೈಕ್‌ಗಳು ಸಹ ಬೆಂಕಿಗಾಹುತಿಯಾಗಿವೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.