ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭ ಮೇಳದ ಗೆಲುವಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಇಂದು ಮಾತನಾಡಿದರು. ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪವನ್ನು ಕಂಡಿತು. ಮಹಾಕುಂಭದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು. ಪ್ರಯಾಗರಾಜ್‌ನಲ್ಲಿ ನಡೆದ ಮಹಾಕುಂಭದ ಯಶಸ್ಸಿಗೆ ಕೊಡುಗೆ ನೀಡಿದ ದೇಶದ ಕೋಟ್ಯಂತರ ಜನರಿಗೆ ನಾನು ನಮಸ್ಕರಿಸುತ್ತೇನೆ ಎಂದರು.